ಕಾರು — ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನ ಸ್ಥಿತಿ ಗಂಭೀರ

ಬೆಳ್ತಂಗಡಿ : ಕಾರು — ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದೆ.
ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ಅಪಘಾತ ನಡೆದಿದ್ದು ಬೈಕ್ ಸವಾರ ಧರ್ಮಸ್ಥಳ ನಿವಾಸಿ ನಿತೇಶ್(28) ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಅಗಿರುವ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ.
ಬೈಕ್ ಸವಾರನ ಓವರ್ ಸ್ವೀಡ್ ಆಗಿ ಹೋಗುತ್ತಿದ್ದ ಎನ್ನಲಾಗಿದ್ದು ಕಾರು ಚಾಲಕ ತಿರುವಿನಲ್ಲಿ ಸಂಪೂರ್ಣ ರಸ್ತೆಯ ಬಲಭಾಗಕ್ಕೆ ವಾಹನವನ್ನು ತಂದಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದ್ದು , ಕಾರಿಗೂ ಹಾನಿಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw