ಕಾರು -ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - Mahanayaka
5:01 PM Thursday 12 - December 2024

ಕಾರು -ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

car bike accident
19/04/2022

ಚಾಮರಾಜನಗರ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ  ಘಟನೆ ಬೇಗೂರು ಸಮೀಪದ ಐಟಿಐ ಕಾಲೇಜು ರಸ್ತೆ ಬಳಿಯ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ನಡೆದಿದೆ.

ಕೇರಳದ ಕಣ್ಣೂರಿನ 30 ವರ್ಷ ವಯಸ್ಸಿನ ಜಾರ್ಜ್ ಕುಟ್ಟಿ ಜೇಮ್ಸ್ ಮೃತ ವ್ಯಕ್ತಿಯಾಗಿದ್ದು, ಈತ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ  ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ರಾಯಲ್ ಎನ್ ಫೀಲ್ಡ್ ಬೈಕ್  ಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೈಕ್ ಸುಟ್ಟು ಕರಕಲಾಗಿದೆ.

ಕಾರಿನಲ್ಲಿ ಸಂಚರಿಸುತ್ತಿದ್ದ ಕನಕಪುರದ ನಿವಾಸಿ ಶೇಖರ್ ಮತ್ತು ಸೌಂದರ್ಯ ಇಬ್ಬರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾರ್ಜ್ ಕುಟ್ಟಿ ಜೇಮ್ಸ್  ಅವರ ಮೃತ ದೇಹವನ್ನು ಬೇಗೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಅಪ್ರಾಪ್ತ ದಲಿತ ಬಾಲಕನಿಂದ ಕಾಲು ನೆಕ್ಕಿಸಿದ ಠಾಕೂರರು!: ವಿಡಿಯೋ ವೈರಲ್

ಶಾಲೆಯಲ್ಲಿ ಸರಣಿ ಬಾಂಬ್ ಸ್ಫೋಟ: ಮಕ್ಕಳ ಸಹಿತ 6 ಮಂದಿಯ ದಾರುಣ ಸಾವು

ಕೋವಿಡ್ ಅನಿರೀಕ್ಷಿತ ಏರಿಕೆ: ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯ ಮುಂಬೈಗೆ ಸ್ಥಳಾಂತರ

ಅಮರಾವತಿಯಲ್ಲಿ ಜನಾಂಗೀಯ ಗಲಭೆ, ನಿಷೇಧಾಜ್ಞೆ ಹೇರಿಕೆ:  23 ಜನ ಬಂಧನ

ಇತ್ತೀಚಿನ ಸುದ್ದಿ