ಹೆರಿಗೆಗೆ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾರಿಗೆ ಬೆಂಕಿ: ಗರ್ಭಿಣಿ ಮಹಿಳೆ ಮತ್ತು ಪತಿ ಸಜೀವ ದಹನ
ಕಣ್ಣೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿಕೊಂಡು ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿ ಸಜೀವ ದಹನವಾಗಿರುವ ಘಟನೆ ಗುರುವಾರ ಕೇರಳದಲ್ಲಿ ನಡೆದಿದ್ದು, ಕಣ್ಣೂರಿನ ಜಿಲ್ಲಾಸ್ಪತ್ರೆಯ ಬಳಿಯೇ ಈ ದುರ್ಘಟನೆ ನಡೆದಿದೆ.
ಪ್ರಜಿತ್(32) ಹಾಗೂ ಅವರ ಪತ್ನಿ ರಿಶಾ(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವರು ಕುಟ್ಟಿಯತ್ತೂರಿನಿಂದ ಜಿಲ್ಲಾಸ್ಪತ್ರೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಘಟನೆ ವೇಳೆ ಕಾರಿನಲ್ಲಿ ಒಟ್ಟು 6 ಮಂದಿ ಇದ್ದರು. ಹಿಂದಿನ ಸೀಟಿನಲ್ಲಿ ಕುಳಿತಿದ್ದ ನಾಲ್ವರು ಕಾರಿನಿಂದ ಜಿಗಿದು ಪಾರಾಗಿದ್ದಾರೆ. ಆದರೆ ಮುಂದಿನ ಸೀಟಿನಲ್ಲಿ ಕುಳಿತಿದ್ದ ಪ್ರಜಿತ್ ಹಾಗೂ ರಿಶಾ ಕಾರಿನಿಂದ ಹೊರಬರಲಾಗದೇ ಸಜೀವ ದಹನವಾಗಿದ್ದಾರೆ.
ಕಾರಿಗೆ ಬೆಂಕಿ ಹತ್ತಿಕೊಂಡ ವೇಳೆ ಕಾರು ಚಲಾಯಿಸುತ್ತಿದ್ದ ಪ್ರಜೀತ್ ಅವರೇ ಕಾಲಿನ ಹಿಂದಿನ ಬಾಗಿಲು ತೆರೆದು ಹಿಂದಿನ ಸೀಟಿನಲ್ಲಿದ್ದವರು ಪಾರಾಗಲು ಸಹಾಯ ಮಾಡಿದ್ದಾರೆ. ಆದರೆ ಮುಂದಿನ ಬಾಗಿಲು ತೆರೆಯಲಾಗದೇ ಬೆಂಕಿಯ ಸುಳಿಯಲ್ಲಿ ಅವರು ಸಿಲುಕಿದ್ದಾರೆ.
ಹೆರಿಗೆ ನೋವಿನ ಹಿನ್ನೆಲೆ ಆಸ್ಪತ್ರೆಗೆ ತೆರಳಿದ್ದ ಕುಟುಂಬ:
ರಿಶಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬ ಜಿಲ್ಲಾಸ್ಪತ್ರೆಗೆ ಪ್ರಯಾಣಿಸುತ್ತಿತ್ತು. ಆಸ್ಪತ್ರೆಗೆ ತಲುಪಲು ಕೇವಲ 200 ಮೀಟರ್ ದೂರ ಇರುವ ವೇಳೆ ಕಾರಿಗೆ ಬೆಂಕಿ ಹತ್ತಿಕೊಂಡಿತ್ತು. ಈ ಘಟನೆಯು ಜನರ ಹೃದಯ ಕರಗಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw