ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

car
05/07/2023

ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ತುಂಬೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ನವಾಜ್ ಎಂಬುವವರು ಕಾರಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದೆ‌. ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version