ಫರಂಗಿಪೇಟೆ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕ್ ಗೆ ಡಿಕ್ಕಿ ಹೊಡೆದ ಕಾರು! - Mahanayaka

ಫರಂಗಿಪೇಟೆ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕ್ ಗೆ ಡಿಕ್ಕಿ ಹೊಡೆದ ಕಾರು!

parangi pette
10/04/2023

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ.

ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಬೈಕಿಗೆ ಡಿಕ್ಕಿಯಾಗಿದೆ.

ಈ ಘಟನೆಯಲ್ಲಿ ಸುಮಾರು ನಾಲ್ಕು ಮಂದಿ ಗಾಯಗೊಂಡಿದ್ದು, ಇವರ ಪೂರ್ಣವಾದ ವಿವರ ಇನ್ನೂ ಕೂಡ ತಿಳಿದುಬಂದಿಲ್ಲ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ