ಕಾರಿಗೆ ಡಿಕ್ಕಿ ಹೊಡೆದ ಬಸ್ : ಇಬ್ಬರು ಶಿಕ್ಷಕರು ಸಾವು
ಹೆಬ್ರಿ: ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ. ಇವರೊಂದಿಗೆ ಕಾರಿನಲ್ಲಿದ್ದ ಶಿಕ್ಷಕ ಸುದರ್ಶನ ಹಾಗೂ ಕಾರು ಚಾಲಕ ಸತೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿನ ಸ್ನೇಹಿತ ಶಿಕ್ಷಕನ ಮದುವೆ ಮುಗಿಸಿ ವಾಪಾಸ್ಸು ಉಡುಪಿಗೆ ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಆಗುಂಬೆ ಕಡೆಗೆ ಹೋಗುತ್ತಿದ್ದ ಮಿನಿ ಬಸ್, ಎದುರಿನಿಂದ ಬರುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆಯಿತು. ಇದರಿಂದ ಇಬ್ಬರು ಗಂಭೀರ ವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು. ಸ್ಥಳಕ್ಕೆ ಹೆಬ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw