ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಪ್ರಯಾಣಿಕನ ದಾರುಣ ಸಾವು
17/11/2024
ನೆಲ್ಯಾಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರು—ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರ ಹೆಸರು ತಿಳಿದು ಬಂದಿಲ್ಲ. ಮೃತಪಟ್ಟವರು ಕುಂಬ್ರ ನಿವಾಸಿಯಾಗಿದ್ದಾರೆ ಎಂದು ಹೇಳಲಾಗಿದೆ.
ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಅಪಘಾತ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: