20 ಅಡಿ ಪ್ರಪಾತಕ್ಕೆ ಉರುಳಿದ ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಕಾರು - Mahanayaka
4:11 PM Wednesday 11 - December 2024

20 ಅಡಿ ಪ್ರಪಾತಕ್ಕೆ ಉರುಳಿದ ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಕಾರು

kottigehara accident
22/11/2022

ಕೊಟ್ಟಿಗೆಹಾರ: ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಾರ್ಮಾಡಿ ಘಾಟ್ ನಾ ಮಲಯ ಮಾರುತ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಪ್ರಾಣಾಪಾಯ ಸಂಭವಿಸಿಲ್ಲ.

ಕಾರನ್ನು ಕ್ರೈನ್ ಬಳಸಿ ಮೇಲೆತ್ತಲಾಗಿದೆ. ಅಪಘಾತದ ವೇಳೆ ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಕರಿದ್ದರು. ಅಪಘಾತದಿಂದಾಗಿ ಇವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ