ಕಾರಿಗೆ ಡಿಕ್ಕಿ ಹೊಡೆದ ಲಾರಿ: ಮಣಿಪಾಲದ ವಿದ್ಯಾರ್ಥಿನಿಗೆ ಗಾಯ
04/08/2022
ಉಡುಪಿ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ವಿದ್ಯಾರ್ಥಿಯೊಬ್ಬಳು ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ
ಮಣಿಪಾಲದ ಎಂಐಟಿ ವಿದ್ಯಾರ್ಥಿನಿ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ನಡೆದ ತಕ್ಷಣ ಮಲ್ಪೆಯ ಅಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲುಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka