ಅಂಬಾಸಿಡರ್ ಕಾರು ಕಳವು ಪ್ರಕರಣ: ಆರೋಪಿ ಅರೆಸ್ಟ್
ಮಂಗಳೂರು: 25 ವರ್ಷಗಳ ಹಿಂದೆ ನಡೆದಿದ್ದ ಕಾರು ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದಲ್ಲಿ ಸುಮಾರು 25 ವರ್ಷ ಹಿಂದೆ ಅಂಬಾಸಿಡರ್ ಕಾರು ಕಳವು ಪ್ರಕರಣ ನಡೆದಿತ್ತು. ಈ ಕೇಸಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪಿರಿಯಾಪಟ್ಟಣದ ಆರೆನಹಳ್ಳಿ ನಿವಾಸಿ ಅಸ್ಲಾಂ ಯಾನೆ ಅಸ್ಲಾಂ ಪಾಷಾ ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಈ ವ್ಯಕ್ತಿಯ ವಿರುದ್ಧ 1997ರಲ್ಲಿ ಅಂಬಾಸಿಡರ್ ಕಾರು ಕಳವಿಗೆ ಸಂಬಂಧಿಸಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದರೆ ಆರೋಪಿಯು 2000ನೆ ಇಸವಿಯಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
2015ರಲ್ಲಿ ಆರೋಪಿಯ ಪತ್ತೆಗೆ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆರೋಪಿಯು ತನ್ನ ವಿಳಾಸವನ್ನು ಪೀಣ್ಯ, ಬೆಂಗಳೂರು ಎಂದು ನೀಡಿರುವುದರಿಂದ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಕೊನೆಗೂ ಆರೋಪಿಯ ಮೂಲ ವಿಳಾಸ ಪತ್ತೆ ಹಚ್ಚಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka