10:50 AM Wednesday 12 - March 2025

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

tumakuru
20/06/2022

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ

ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಘಟನೆ ಸಂಭವಿಸಿದೆ.  ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಕಾರು ಬರುತ್ತಿದ್ದರೆ, ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಬಸ್ ಹೊರಟಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಗಿರೀಶ್​ (37), ಮಾನ್ಯ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರವಾಹ ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸರು ಸಾವು!

ಇಂದು ಮಧ್ಯಾಹ್ನ ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಗಮನ: ಏನೇನು ಕಾರ್ಯಕ್ರಮವಿದೆ?

ಮೊದಲ ಬಾರಿಗೆ ತನ್ನ ಮಗುವಿನ ಚಿತ್ರ ಹಂಚಿಕೊಂಡ ಯುವರಾಜ್ ಸಿಂಗ್

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ: ಮಹಿಳೆಯ ದಾರುಣ ಸಾವು

ಇತ್ತೀಚಿನ ಸುದ್ದಿ

Exit mobile version