ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಕಾರಿನ ಕಾಜು ಒಡೆದು 4.5 ಲಕ್ಷ ರೂ. ಕಳವು
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ವ್ಯಕ್ತಿಯೊಬ್ಬರ ಕಾರಿನ ಗಾಜು ಒಡೆದು ಹಣ ಕಳವು ಮಾಡಿರುವ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಲಕ್ಷ್ಮೀಶ ಎಂಬವರು ಮನೆಯ ಇಎಂಐ ಕಟ್ಟಲು ಬ್ಯಾಂಕ್ ನಿಂದ 4.5 ಲಕ್ಷ ರೂಪಾಯಿ ಡ್ರಾ ಮಾಡಿಕೊಂಡು ಬಂದಿದ್ದರು. ಇವರನ್ನು ಬ್ಯಾಂಕ್ ನಿಂದ ಎರಡು ಬೈಕ್ ಗಳಲ್ಲಿ ಹಿಂಬಾಲಿಸಿಕೊಂಡು ಕಳ್ಳರು ಬಂದಿದ್ದರು ಎನ್ನಲಾಗಿದೆ.
ಕಾರಿನಲ್ಲಿ ಹಣ ಇಟ್ಟು ಸ್ನೇಹಿತನ ಭೇಟಿಗೆ ತೆರಳಿದ್ದ ವೇಳೆ ಕಳ್ಳರು ಕಾರಿನ ಗಾಜು ಒಡೆದು ಹಣ ದೂಚಿ ಪರಾರಿಯಾಗಿದ್ದಾರೆನ್ನಲಾಗಿದೆ. ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka