ಪ್ರಪಾತದಿಂದ ಉರುಳಿದ ಕಾರು: ಪ್ರವಾಸಕ್ಕೆ ಆಗಮಿಸಿದ್ದ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ಕಾರೊಂದು ಪ್ರಪಾತಕ್ಕೆ ಉರುಳಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯವಾಗಿದೆ.
ಮೈಸೂರಿನ ಕೆ.ಆರ್. ನಗರದಿಂದ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಳ್ಳಯ್ಯನಗಿರಿ ಪರ್ವತದ ತುದಿಯ ರಸ್ತೆಯಿಂದ ಕಾರು ಪ್ರಪಾತಕ್ಕೆ ಉರುಳಿದೆ.
ಸೀತಾರಾಮ್, ಸುಗುಣ, ಶ್ರೇಯಸ್, ಶುಭಾ ಗಂಭೀರ ಗಾಯಾಳು ಎಂದು ತಿಳಿದು ಬಂದಿದೆ. ಇವರ ಕುಟುಂಬ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿತ್ತು. ಪ್ರವಾಸ ಮುಗಿಸಿ ವಾಪಸ್ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಪ್ರಪಾತಕ್ಕೆ ಬಿದ್ದಿದೆ.
ಚಿಕ್ಕಮಗಳೂರು ತಾಲೂಕಿನ ಕವಿಕಲ್ ಗಂಡಿ ಬಳಿ ಜಾಗರ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw