ಕಾರಿಗೆ ಗುಂಡು ಹಾರಿಸಿ ಓವೈಸಿಯ ಹತ್ಯೆಗೆ ಯತ್ನ!
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಲಾಗಿದ್ದು, ಮೀರತ್ ನಲ್ಲಿ ಚುನಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಉತ್ತರ ಪ್ರದೇಶದ ಛಜರ್ಸಿ ಟೋಲ್ ಫ್ಲಾಜಾ ಬಳಿ ಈ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಒಬ್ಬ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನ ಜೊತೆಗಿದ್ದ ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮೀರತ್ ಐಜಿ ರೇಂಜ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿರುವ ಸ್ಥಳವನ್ನು ಪರಿಶೀಲನೆ ನಡೆಸಲಾಗುತ್ತಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಎಐಎಂಐಎಂ ಪ್ರಭಾವ ಬೀರುತ್ತಿದ್ದು, ಈ ನಡುವೆ ಓವೈಸಿ ಹತ್ಯೆಗೆ ಯತ್ನ ನಡೆಸಲಾಗಿದೆ.
ಓವೈಸಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಅವರನ್ನು ಹತ್ಯೆ ಮಾಡಲು ಯತ್ನಿಸಿರುವುದಾಗಿ ಬಂಧಿತ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಕೃತ್ಯದ ಹಿಂದೆ ಚುನಾವಣೆ ಸಂದರ್ಭದಲ್ಲಿ ಭೀತಿ ಸೃಷ್ಟಿಸುವ ಉದ್ದೇಶ ಕೂಡ ಕಂಡು ಬಂದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಓವೈಸಿಗೆ ಝೆಡ್ ಶ್ರೇಣಿಯ ಭದ್ರತೆ:
ಅಸಾದುದ್ದಿನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಮರುದಿನವೇ ಅವರಿಗೆ ಝೆಡ್ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್ ರೇಪ್
ಗಂಡನನ್ನು ಆನ್ ಲೈನ್ ಸೈಟ್ ನಲ್ಲಿ ಮಾರಾಟಕ್ಕಿಟ್ಟ ಪತ್ನಿ!
ವೃದ್ಧೆ ಬದುಕಿರುವಾಗಲೇ ಮರಣ ಪತ್ರ ನೀಡಿದ ಅಧಿಕಾರಿಗಳು
ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ: ಸಿದ್ದರಾಮಯ್ಯ
ಓಮಸತ್ವ, ಕಸ್ತೂರಿ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯ ಅತ್ಯಾಚಾರ ಯತ್ನ