ಕಹಿ ಘಟನೆಗಳಿಂದ ಎಚ್ಚೆತ್ತ ಕಾಂಗ್ರೆಸ್: ಫಲಿತಾಂಶಕ್ಕೂ ಮೊದಲು ಎಚ್ಚರಿಕೆಯ ಹೆಜ್ಜೆ!
ಕಳೆದ ಚುನಾವಣೆಯಲ್ಲಿ ಆದ ಕಹಿ ಘಟನೆಗಳಿಂದ ಈ ಬಾರಿ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಈ ಬಾರಿಯ ಚುನಾವಣಾ ಫಲಿತಾಂಶಕ್ಕೂ ಮೊದಲೇ ಅಲರ್ಟ್ ಆಗಿರುವ ಕೈಪಡೆ ಎಚ್ಚರಿಕೆಯ ಹೆಜ್ಜೆಯನ್ನಿಡಲು ಮುಂದಾಗಿದೆ.
ಈ ಬಾರಿಯ ಸಾಕಷ್ಟು ಸಮೀಕ್ಷೆಗಳು ಕಾಂಗ್ರೆಸ್ ಗೆ ಅನುಕೂಲಕರವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕೂಡ ಮಾನಸಿಕವಾಗಿ ಸಿದ್ಧವಾಗಿದೆ. ಇದೇ ಸಂದರ್ಭದಲ್ಲಿ ಆಪರೇಷನ್ ಕಮಲದ ಭೀತಿ ಕೂಡ ಎದುರಾಗಿದೆ.
ರಾಜ್ಯ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಸಭೆ ನಡೆಸುತ್ತಿದ್ದು, ರಾತ್ರಿ ಶಾಲೆ ತೆರೆದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭ್ಯರ್ಥಿಗಳಿಗೆ ಸುಮಾರು 2 ಗಂಟೆಗಳ ಕ್ಲಾಸ್ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.
ವರ್ಚೂವಲ್ ಸಭೆಯಲ್ಲಿ ಸ್ಟ್ರಾಂಗ್ ರೂಮ್ ಗಳ ಬಗ್ಗೆ ಗಮನ ಇಡುವುದು, ಹಾಗೂ ಆಪರೇಷನ್ ಕಮಲಕ್ಕೆ ಒಳಗಾಗ ಬೇಡಿ, ಲೀಡ್ ಸಿಗುತ್ತಿದ್ದಂತೆಯೇ ಬೆಂಗಳೂರಿಗೆ ಬಂದು ಬಿಡಿ. ಸರ್ಕಾರ ರಚಿಸುವವರೆಗೂ, ನಾವು ಸೂಚಿಸುವ ಸ್ಥಳದಲ್ಲಿಯೇ ಇರಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw