ಕಾರಿಗೆ ಡಿಕ್ಕಿ ಹೊಡೆದ ಲಾರಿ | ಓರ್ವ ಸಾವು, ಮೂವರ ಸ್ಥಿತಿ ಗಂಭೀರ - Mahanayaka
3:19 AM Wednesday 5 - February 2025

ಕಾರಿಗೆ ಡಿಕ್ಕಿ ಹೊಡೆದ ಲಾರಿ | ಓರ್ವ ಸಾವು, ಮೂವರ ಸ್ಥಿತಿ ಗಂಭೀರ

08/02/2021

ಕಾಸರಗೋಡು:  ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಓರ್ವ ದಾರುಣವಾಗಿ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬಂದ್ಯೋಡು ಮುಟ್ಟಂ ಎಂಬಲ್ಲಿ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಟ್ಟಂ ಸೈದಾಲಿ ಮೃತಪಟ್ಟವರಾಗಿದ್ದು, ಇವರ ಜೊತೆಗಿದ್ದ  ಮಗನ ಪತ್ನಿ ಹಾಘೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ಇಲ್ಲಿನ ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ