ಕಾರ್ಕಳ: ನೀನು ಎಸ್‌ ಸಿ ದೇವಸ್ಥಾನದ ಒಳಗೆ ಬರಬಾರದು: ಡಿಜಿಟಲ್ ಯುಗದಲ್ಲೂ ನಿಲ್ಲದ ಜಾತಿ ನಿಂದನೆ - Mahanayaka

ಕಾರ್ಕಳ: ನೀನು ಎಸ್‌ ಸಿ ದೇವಸ್ಥಾನದ ಒಳಗೆ ಬರಬಾರದು: ಡಿಜಿಟಲ್ ಯುಗದಲ್ಲೂ ನಿಲ್ಲದ ಜಾತಿ ನಿಂದನೆ

caste abuse
17/03/2023

ಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ಕಾರ್ಕಳ ಪುರಸಭಾ ಸದಸ್ಯೆಯೊಬ್ಬರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಘಟನೆ ಮಾ.14ರಂದು ಮಧ್ಯಾಹ್ನ 1:45ಕ್ಕೆ ಕಾರ್ಕಳ ಪುರಸಭಾ ರಸ್ತೆಯಲ್ಲಿ ನಡೆದಿದೆ.

ಪ್ರತಿಮಾ ರಾಣೆ(42) ಕಾರ್ಕಳ ಮಾರಿಗುಡಿಯ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದು, ಮಾ.12ರಂದು ಬೆಳಗ್ಗೆ ದೇವಸ್ಥಾನದ ಊಟದ ವಿಚಾರವಾಗಿ ವಾಟ್ಸಾಪ್‌ ನಲ್ಲಿ ಬಂದ ಸಂದೇಶದ ಬಗ್ಗೆ ಕಾರ್ಕಳದ ರಮಿತಾ ಶೈಲೇಂದ್ರ, ಎಸ್‌ ಸಿ ಎಸ್‌ಟಿಯವರಿಗೆ ಊಟ ಬಡಿಸಲು ಬಿಡಬೇಡಿ, ಅವರನ್ನು ಒಳ ಬಿಟ್ಟಲ್ಲಿ ಮೈಲಿಗೆ ಆಗುತ್ತದೆ ಎಂದು ಹೇಳಿ ಸಾರ್ವಜನಿಕವಾಗಿ ನಿಂದಿಸಿದರೆಂದು ದೂರಲಾಗಿದೆ.

ಇದೇ ವಿಚಾರ ವಾಟ್ಸಾಪ್ ಮೂಲಕ ಬಂದಿರುವ ಬಗ್ಗೆ ರಮಿತಾ, ಪ್ರತಿಮಾ ಅವರಲ್ಲಿ ಈ ವಾಟ್ಸಾಪ್ ಸಂದೇಶವನ್ನು ನೀವೇ ಕಳುಹಿಸಿ ಕೊಟ್ಟಿರುತ್ತೀರಾ ಎಂದು ಗಲಾಟೆ ಮಾಡಿದ್ದು, ನೀನು ಎಸ್‌ ಸಿ ದೇವಸ್ಥಾನದ ಒಳಗೆ ಬರಬಾರದು ಎಂದು ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ. ಅದರಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ