ಜಾತಿ ಗಣತಿ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಮಾಡಲಾಗಿದೆ: ಆರ್. ಅಶೋಕ್ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಜಾತಿ ಗಣತಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಆಗಿನ ಹಿಂದುಳಿದ ಆಯೋಗದ ಅಧ್ಯಕ್ಷ ಕಾಂತರಾಜು ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು, ಜಾತಿಗಣತಿ ವರದಿಯನ್ನು ಸಿದ್ಧಪಡಿಸಿದ್ದಾರೆ. ಬಳಿಕ ಕಾಂತರಾಜು ಸಹಿ ಹಾಕದೆ ಓಡಿದ್ದಾರೆ. ಈ ವರದಿಯಲ್ಲಿ ರಹಸ್ಯವೇನೂ ಇಲ್ಲ, ಎಲ್ಲಾ ಜಗಜ್ಜಾಹೀರಾಗಿದೆ ಎಂದರು.
ಇದು ಜಾತಿ, ಜಾತಿಗಳನ್ನು, ಧರ್ಮ ಧರ್ಮಗಳನ್ನು ಒಡೆಯುವ ವರದಿ. ಜನರನ್ನು ಕೂಡಿಸೋದು ಕಷ್ಟ, ಒಡೆಯೋದು ಸುಲಭ. ಸಿದ್ದರಾಮಯ್ಯ ಒಡೆಯುವುದರಲ್ಲಿ ಎಕ್ಸ್ ಪರ್ಟ್. ಜಾತಿ, ಧರ್ಮಗಳ ಮಧ್ಯೆ ಒಡಕು ತರುತ್ತಿದ್ದಾರೆ. ಇದು ಸಿದ್ದರಾಮಯ್ಯ ಪ್ರಾಯೋಜಕತ್ವದ ಅವೈಜ್ಞಾನಿಕ ವರದಿ ಎಂದು ವಾಗ್ದಾಳಿ ನಡೆಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: