ಹರೀಶ್ ಪೂಂಜರ ಕಚೇರಿಯಿಂದಲೇ ಗೋ ಸಾಗಾಟ ನಡೆಯುತ್ತಿದೆ: ಮಹೇಶ್ ಶೆಟ್ಟಿ ತಿಮರೋಡಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜ ಅವರು ಹಿಂದೂತ್ವದ ವಿರುದ್ದವಾಗಿ ಕೆಲಸ ಮಾಡುತ್ತಿದ್ದಾರೆ. ಹರೀಶ್ ಪೂಂಜರ ಕಚೇರಿಯಿಂದಲೇ ಗೋ ಸಾಗಾಟ ನಡೆಯುತ್ತಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಎಂಬುವವವರೇ ಗೋಸಾಗಾಟ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಸಿದ್ದಾರೆ.
ಅವರು ಬೆಳ್ತಂಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರು ಎಂಬ ಹೆಸರಿನಲ್ಲಿ ಹರೀಶ್ ಪೂಂಜರ ಜನರು ಕೇಸರಿ ಹಾಕಿಕೊಂಡು ದನ ಕೊಂಡು ಹೋಗಿ ಕಸಾಯಿ ಖಾನೆಗೆ ಕೊಡುತ್ತಿದ್ದಾರೆ. ಹಲವು ಗ್ರಾಮಗಳಲ್ಲಿ ಇದು ನಡೆಯುತ್ತಿದೆ. ಇಂತಹವರನ್ನು ಹಿಡಿದ ಎಷ್ಟೋ ಉದಾಹರಣೆಗಳಿವೆ. ಸಾಕ್ಷಿ ಸಮೇತ ಸಾಬೀತುಪಡಿಸುತ್ತೇವೆ. ಹರೀಶ್ ಪೂಂಜರ ಮನೆಯ ಸಮೀಪವೇ ಅಕ್ರಮವಾಗಿ ದನ ಕಡಿಯುವ ಕಾರ್ಯ ನಡೆಯುತ್ತಿದೆ. ಇದು ಹರೀಶ್ ಪೂಂಜರಿಗೆ ತಿಳಿದಿದ್ದರೂ ಅವರು ಬೆಂಬಲ ನೀಡುತಿದ್ದಾರೆ ಎಂದು ಆರೋಪಿಸಿದರು.
ಇನ್ನು ಸಿಎಂ ಸಿದ್ದರಾಮಯ್ಯ 24 ಮಂದಿ ಹಿಂದೂಗಳನ್ನು ಹತ್ಯೆ ಮಾಡಿರುವುದಾಗಿ ಹರೀಶ್ ಪೂಂಜ ಹೇಳುತ್ತಾರೆ. ಇದು ಸತ್ಯವಾದರೆ ಸಿದ್ದರಾಮಯ್ಯ ಜೈಲಿಗೆ ಹೋಗಬೇಕು. ಹರೀಶ್ ಪೂಂಜ ಸುಳ್ಳು ಹೇಳಿದರೆ ಅವರಿಗೆ ಶಿಕ್ಷೆಯಾಗಬೇಕು. ಸಿದ್ದರಾಮಯ್ಯ ಕೊಲೆ ಮಾಡಿದ್ದು ಸರಿಯಾದರೆ ಕಳೆದ ಐದು ವರ್ಷ ಹರೀಶ್ ಪೂಂಜ ಏನು ಮಾಡುತ್ತಿದ್ದರು. ಬಿಜೆಪಿ ಸರಕಾರ ಏನುಮಾಡುತ್ತಿತ್ತು. ಈಗ ಹರೀಶ್ ಪೂಂಜನಿಗೆ ಜ್ಞಾನೋದಯವಾಗಿದೆಯಾ ಎಂದು ಪ್ರಶ್ನಿಸಿದರು.
ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ ಬಂದು ಸುಳ್ಳು ಹೇಳುವುದು ಯಾಕೆ. ಇಂತಹ ಇಬ್ಬಗೆಯ ನೀತಿಯನ್ನು ಅಂದಿನಿಂದಲೂ ಹರೀಶ್ ಪೂಂಜ ಅನುಸರಿಸಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw