ಕಾವೇರಿ ನದಿ ನೀರು ಹಂಚಿಕೆ ವಿವಾದ: ಕರ್ನಾಟಕದ ಜತೆ ಮಾತುಕತೆ ಸಾಧ್ಯವಿಲ್ಲ ಎಂದ ತಮಿಳುನಾಡಿನ ಜಲಸಂಪನ್ಮೂಲ ಸಚಿವ - Mahanayaka
9:21 AM Wednesday 15 - January 2025

ಕಾವೇರಿ ನದಿ ನೀರು ಹಂಚಿಕೆ ವಿವಾದ: ಕರ್ನಾಟಕದ ಜತೆ ಮಾತುಕತೆ ಸಾಧ್ಯವಿಲ್ಲ ಎಂದ ತಮಿಳುನಾಡಿನ ಜಲಸಂಪನ್ಮೂಲ ಸಚಿವ

21/09/2023

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿ ಕರ್ನಾಟಕ ರಾಜ್ಯದೊಂದಿಗೆ ಯಾವುದೇ ಮಾತುಕತೆಗೂ ಅವಕಾಶವಿಲ್ಲ ಎಂದು ತಮಿಳುನಾಡಿನ ಜಲಸಂಪನ್ಮೂಲ ಸಚಿವ ದುರೈಮುರುಗನ್‌ ತಿಳಿಸಿದ್ದಾರೆ.

ನೀರಿನ ವಿವಾದ ಬಗೆಹರಿಸಲು ರಾಜ್ಯಗಳ ಸಭೆ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಸರ್ಕಾರ ಮನವಿ ಮಾಡಿರುವ ಕುರಿತು ಸುದ್ದಿಗಾರರಿಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. ಈ ಹಿಂದಿನ ಮಾತುಕತೆಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡದ ಕಾರಣ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ. ಹೀಗಾಗಿ ಕರ್ನಾಟಕದ ಜೊತೆ ಮಾತುಕತೆಗಳಿಗೆ ಅವಕಾಶವಿಲ್ಲ. ಹಲವು ವರ್ಷಗಳ ಮಾತುಕತೆ ಫಲ ನೀಡದ ಕಾರಣ ನ್ಯಾಯಾಧೀಕರಣದ ಮೊರೆ ಹೋಗಿದ್ದೆವು. ನಾವು ಇಲ್ಲಿಯವರೆಗೆ ಬಂದಿದ್ದೇವೆ. ಏನೇ ಇರಲಿ, ಅಂತಿಮ ಅಧಿಕಾರ ಸುಪ್ರೀಂ ಕೋರ್ಟ್ ಬಿಟ್ಟಿದ್ದು ಎಂದು ಹೇಳಿದರು.


ADS

ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಅರ್ಜಿ ವಿಚಾರಣೆ ನಡೆದಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ ಸೂಚನೆಯಂತೆ ಸುಪ್ರೀಂ ಕೋರ್ಟ್ ಕೂಡ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಹರಿಸಲು ಆದೇಶ ನೀಡಿದೆ. ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ 3 ಸದಸ್ಯ ಪೀಠದಿಂದ ಅರ್ಜಿ ವಿಚಾರಣೆ ನಡೆದಿದ್ದು ಕರ್ನಾಟಕಕ್ಕೆ ಇದರಿಂದ ಹಿನ್ನಡೆ ಆಗಿದೆ.

ಇತ್ತೀಚಿನ ಸುದ್ದಿ