ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದವರು ಸಾಕ್ಷ್ಯ ನೀಡಿದ್ದಾರೆ | ನಳಿನ್ ಕುಮಾರ್ ಕಟೀಲ್ - Mahanayaka
10:07 AM Wednesday 5 - February 2025

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದವರು ಸಾಕ್ಷ್ಯ ನೀಡಿದ್ದಾರೆ | ನಳಿನ್ ಕುಮಾರ್ ಕಟೀಲ್

naleen kumar kateel
13/10/2021

ಮಂಗಳೂರು: ಪಕ್ಷದ ಕಚೇರಿಯಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಸ್ವಪಕ್ಷದವರೇ ಆಂತರಿಕವಾಗಿ ಮಾತನಾಡಿಕೊಂಡಿರುವ ವಿಚಾರ ಹೊರ ಬರುತ್ತಿದ್ದಂತೆಯೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಕಾಂಗ್ರೆಸ್ ಗೆ ಟ್ವೀಟ್ ಮೂಲಕ ಕುಟುಕಿದ್ದಾರೆ.

ತಕ್ಕಡಿ‌‌ ಮೇಲೆಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ರಾಜ್ಯಾಧ್ಯಕ್ಷರಾಗಿ ಇದ್ದರೆ ಪಕ್ಷ ನಿರ್ನಾಮವಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿರುವುದು ತಡವಾಗಿಯಾದರೂ ಜ್ಞಾನೋದಯವಾದಂತಾಗಿದೆ ಎಂದು ನಳಿನ್ ಕುಮಾರ್ ಕಟೀಲ್  ಹೇಳಿದರು.

ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು. ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆಗಳು ಎಂದು ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಬಿಜೆಪಿ ಅಭ್ಯರ್ಥಿಗೆ ಸಿಕ್ಕಿದ್ದು ಕೇವಲ ಒಂದೇ ಮತ | ತನ್ನ ಕುಟುಂಬದ 5 ಮಂದಿಯೂ ಬಿಜೆಪಿಗೆ ವೋಟ್ ಹಾಕಲಿಲ್ಲ!

ಡಿ.ಕೆ.ಶಿವಕುಮಾರ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಗುಸುಗುಸು ಮಾತು: ಕೊನೆಗೂ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ ಉಗ್ರಪ್ಪ

“ಸಾವರ್ಕರ್ ರಾಷ್ಟ್ರಪಿತ” ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸುತ್ತದೆ: ಓವೈಸಿ ಹೇಳಿಕೆ

ವೋಟ್ ಬ್ಯಾಂಕ್ ಗಾಗಿ ದಸರಾ ಹೆಸರಲ್ಲಿ ಜನರ ತೆರಿಗೆ ಹಣ ಲೂಟಿ | ಸುನೀಲ್‌ ಕುಮಾರ್ ಬಜಾಲ್ ಆರೋಪ

ನೈತಿಕತೆ ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತೆ | ಅನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಡಿಕೆಶಿ ಕುಡುಕರಂತೆ ತೊದಲುತ್ತಾರೆ, ಕಲೆಕ್ಷನ್ ಗಿರಾಕಿ | ಮೈಕ್ ಆನ್ ಆಗಿರೋದು ತಿಳಿಯದೇ ಮಾತನಾಡಿ ಕಾಂಗ್ರೆಸ್ ನಾಯಕರ ಯಡವಟ್ಟು!

ಮದುವೆ ಆದರೂ ‘ಸಿಂಗಲ್’ ಆಗಿರುವ ಮೋದಿ ಬಗ್ಗೆ ಮಾತನಾಡುವ ಧೈರ್ಯ ನಿಮಗಿದೆಯೇ? | ಸುಧಾಕರ್ ಗೆ ಕುಟುಕಿದ ಕಾಂಗ್ರೆಸ್

ಇತ್ತೀಚಿನ ಸುದ್ದಿ