ಸಿಬಿಐಯು ಸಾಮಾನ್ಯ ಜನರಿಗೆ ಹೊಸ ಭರವಸೆ ಮತ್ತು ಶಕ್ತಿಯನ್ನು ನೀಡಿದೆ: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಿಬಿಐಯ ವಜ್ರ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು ಸಿಬಿಐಯನ್ನು ಹಾಡಿಹೊಗಳಿದ್ದಾರೆ.
ಸಿಬಿಐಯು ಸತ್ಯ ಹಾಗೂ ನ್ಯಾಯದ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಸಾಮಾನ್ಯ ಜನರಿಗೆ ಹೊಸ ಭರವಸೆ ಮತ್ತು ಶಕ್ತಿಯನ್ನು ನೀಡಿದೆ ಎಂದು ಅವರು ಹೇಳಿದರು.
ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡುವುದು ಸಿಬಿಐನ ಮುಖ್ಯ ಜವಾಬ್ದಾರಿಯಾಗಿದೆ. ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಯಾವುದೇ ರೀತಿಯ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇಲ್ಲ. ಭ್ರಷ್ಟಾಚಾರದ ವಿರುದ್ಧ ಕಾರ್ಯಾಚರಣೆ ನಡೆಸುವ ವೇಳೆ ತನಿಖಾ ಸಂಸ್ಥೆಗಳಿಗೆ ಯಾವುದೇ ಹಿಂಜರಿಕೆ ಬೇಡ ಪ್ರಧಾನಿ ಮೋದಿ ತಿಳಿಸಿದ್ದರು.
ಭ್ರಷ್ಟಾಚಾರ ಒಂದು ಸಾಮಾನ್ಯ ಅಪರಾಧ ಅಲ್ಲ. ಭ್ರಷ್ಟಾಚಾರವು ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಭ್ರಷ್ಟಾಚಾರದಿಂದ ಹಲವು ಅಕ್ರಮಗಳು, ಅಪರಾಧಗಳು ಹುಟ್ಟಿಕೊಳ್ಳುತ್ತಿದ್ದು,ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ, ನ್ಯಾಯ ದಾನ ವ್ಯವಸ್ಥೆಗೆ ಭ್ರಷ್ಟಾಚಾರವು ಅತಿ ದೊಡ್ಡ ಅಡ್ಡಿ ಎಂದು ಪ್ರಧಾನಿ ಮೋದಿ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw