ಡಿಕೆಶಿ ಪುತ್ರಿ ಐಶ್ವರ್ಯಗೆ ಸಿಬಿಐ ನೋಟಿಸ್: 10 ದಿನದಲ್ಲಿ ವಿಚಾರಣೆಗೆ ಹಾಜರಾಗಲು ಸೂಚನೆ

aishwarya
08/02/2023

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಅವರ ಪುತ್ರಿ ಐಶ್ವರ್ಯಗೆ ಸಿಬಿಐ ನೋಟಿಸ್‌ ಕೊಟ್ಟಿದ್ದು, 10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಎರಡು ತಿಂಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲಿಸಿ ಬಳಿಕ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ.

10 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಡಿಕೆಶಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾಗ, ಕಾಲೇಜು ಟ್ರಸ್ಟ್‌ನ ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ತನಿಖೆ ನಡೆಸಿ ಕಾಲೇಜಿನ ಫೀಸ್, ಕಾಲೇಜಿನ ಆಯವ್ಯಯ ಪಟ್ಟಿಯ ಸಮೇತ ವಿಚಾರಣೆಗೆ ಹಾಜರಾಗಲು ಐಶ್ವರ್ಯಗೆ ನೋಟಿಸ್ ನೀಡಿದೆ.

ಐಶ್ವರ್ಯ ಮಾತ್ರವಲ್ಲದೇ ಕಾಲೇಜಿನ ಎಲ್ಲಾ ನಿರ್ದೇಶಕರಿಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಮೂಲಕ ಸಿಬಿಐ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version