ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು | ಪ್ರಧಾನಿ ನೇತೃತ್ವದ ಸಭೆಯಲ್ಲಿ ನಿರ್ಧಾರ

cbse
02/06/2021

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿಯ ಈ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಲು ಕೇಂದ್ರ ಸರ್ಕಾರವು ಮಂಗಳವಾರ ನಿರ್ಧರಿಸಿದೆ. ಕೋವಿಡ್‌-19 ಸಾಂಕ್ರಾಮಿಕ ತೀವ್ರವಾಗಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ.

 ‘ಕೋವಿಡ್‌ನಿಂದಾಗಿ ದೇಶದಲ್ಲಿ ಅನಿಶ್ಚಿತ ಸ್ಥಿತಿ ಇದೆ. ಹಾಗಾಗಿ, ಸಂಬಂಧಪಟ್ಟವರಿಂದ ಪಡೆದ ಮಾಹಿತಿ ಪ್ರಕಾರ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲು ತೀರ್ಮಾನಿಸಲಾಗಿದೆ’ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ‌ಕ್ಕೆ ಬರಲಾಗಿದೆ. 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸುವುದಕ್ಕೆ ಬೇಕಾದ ಕ್ರಮಗಳನ್ನು ಸಿಬಿಎಸ್‌ಇ ಕೈಗೊಳ್ಳಲಿದೆ. ನ್ಯಾಯಯುತವಾಗಿ, ಸಮಯ ಮಿತಿಯೊಳಗೆ ಅತ್ಯಂತ ಸ್ಪಷ್ಟವಾಗಿ ವ್ಯಾಖ್ಯಾನಿಸಲಾದ ಮಾನದಂಡಗಳ ಅನ್ವಯ ಫಲಿತಾಂಶ ಸಿದ್ಧಪಡಿಸಬೇಕು ಎಂದು ಪ್ರಧಾನಿಯು ಸಿಬಿಎಸ್‌ ಇಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

Exit mobile version