ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ  ಓರ್ವನ ಬಂಧನ - Mahanayaka

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ  ಓರ್ವನ ಬಂಧನ

mangalore
13/09/2023

“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು  ಮಾರಾಟ ಮಾಡುತ್ತಿದ್ದವನನ್ನು ಬಂಧಿಸಲಾಗಿದೆ.


Provided by

ಮಂಗಳೂರು ನಗರದ ಉಳ್ಳಾಲ ಒಂಬತ್ತು ಕರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ವ್ಯಕ್ತಿಯೊಬ್ಬನು ಅಕ್ರಮವಾಗಿ ಮಾದಕ ವಸ್ತುವಾದ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಅಬ್ದುಲ್ ಸವಾಜ್ @ ಚವ್ವಾ(30)

ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್,  ಮೊಬೈಲ್ ಫೋನ್-1, ನಗದು ರೂ. 2120/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,17,000/-ಆಗಬಹುದು. ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.


Provided by

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ  ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು  ನಡೆಸಿರುತ್ತಾರೆ.

ಇತ್ತೀಚಿನ ಸುದ್ದಿ