ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರಿದ್ ಹಬ್ಬ ಆಚರಣೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು
ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಮಸೀದಿಯ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು.
ಉಡುಪಿ ಕೊಲಂಬೆಯ ಮದೀನ ಮಸೀದಿಯಲ್ಲಿ ಮೌಲಾನ ಶೌಕತ್ ಅಲಿ ರಝ್ವಿ, ಕಾಪು ಪೊಲಿಪು ಮಸೀದಿಯಲ್ಲಿ ಖತೀಬ್ ಇರ್ಷಾದ್ ಸಅದಿ ನೇತೃತ್ವದಲ್ಲಿ ನಮಾಝ್ ನಿರ್ವಹಿಸಲಾಯಿತು.
ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಲಾಯಿತು. ಇದರಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು
ಈ ಸಂದರ್ಭದಲ್ಲಿ ಧರ್ಮಗುರುಗಳು ಈದ್ ಸಂದೇಶ ನೀಡಿದರು. ಹಬ್ಬದ ದಿನ ಯಾವುದೇ ಅಹಿತಕರ ಘಟನೆ ನಡೆದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಉಡುಪಿ: ನಾಯರ್ ಕೆರೆ ಮಸೀದಿಯಲ್ಲಿ ಸೌಹಾರ್ದತೆಯ ಸಂದೇಶ
ಉಡುಪಿ ಬ್ರಹ್ಮಗಿರಿಯ ನಾಯರ್ ಕೆರೆ ಹಾಶಿಮಿ ಮಸೀದಿಯಲ್ಲಿ ಈದುಲ್ ಅಝಾ ಹಬ್ಬದ ವಿಶೇಷ ನಮಾಝ್ ನಿರ್ವಹಿಸಲಾಯಿತು.
ಮೌಲಾನಾ ಉಬೈದುರ್ರಹಮಾನ್ ನದ್ವಿ ಅವರ ನೇತೃತ್ವದಲ್ಲಿ ವಿಶೇಷ ನಮಾಜ್ ನೆರವೇರಿಸಲಾಯಿತು. ನೂರಾರು ಮುಸ್ಲಿಂ ಬಾಂಧವರು ಇದರಲ್ಲಿ ಪಾಲ್ಗೊಂಡಿದ್ದರು.
ಬಳಿಕ ಸಂದೇಶ ನೀಡಿದ ಅವರು ಯುವಕರು ದುಶ್ಚಟಗಳಿಂದ ದೂರ ಇರಬೇಕು ಸಮಾಜದಲ್ಲಿ ಪ್ರೀತಿ ಹರಡಿ ಎಲ್ಲರೊಂದಿಗೆ ಸಹಬಾಳ್ವೆ ನಡೆಸಿ ಸಮಾಜದಲ್ಲಿ ಸೌಹಾರ್ದತೆ ವಾತಾವರಣವನ್ನು ನಿರ್ಮಿಸಬೇಕು ಎಂದು ಕರೆ ನೀಡಿದರು.ಈದ್ ನಮಾಜಿನಲ್ಲಿ ಮಹಿಳೆಯರಿಗೂ ಅವಕಾಶ ಕಲ್ಪಿಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw