ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಧರಧರನೇ ಎಳೆದೊಯ್ದ ಸಿಮೆಂಟ್ ಕಂಪೆನಿ ಸಿಬ್ಬಂದಿ

ಕಲಬುರಗಿ: ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದ ಬಿಹಾರದ ವಲಸೆ ಕಾರ್ಮಿಕನ ಮೃತದೇಹವನ್ನು ನೆಲದಲ್ಲಿ ಧರ ಧರನೇ ಎಳೆದೊಯ್ದ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.
ಬಿಹಾರದ ವಲಸೆ ಕಾರ್ಮಿಕ ವರ್ಷದ ಚಂದನ್ ಸಿಂಗ್ (35) ಮೃತಪಟ್ಟ ಕಾರ್ಮಿಕನಾಗಿದ್ದಾನೆ. ಮಂಗಳವಾರ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಸಮೀಪದ ಕೋಡ್ಲಾ ಗ್ರಾಮದ ಶ್ರೀ ಸಿಮೆಂಟ್ ಕಂಪೆನಿ ಆವರಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಹೃದಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೃತಪಟ್ಟ ಕಾರ್ಮಿಕ ಮೃತದೇಹವನ್ನು ನಾಲ್ವರು ಹಿಡಿದುಕೊಂಡು ಧರಧರನೇ ಎಳೆದುಕೊಂಡು ಹೋಗುತ್ತಿದ್ದು, ಇತರ ಕಾರ್ಮಿಕರ ಅಸಹಾಯಕತೆಯಿಂದ ನೋಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರ್ಮಿಕನ ಮೃತ ದೇಹಕ್ಕೆ ಕನಿಷ್ಠ ಗೌರವ ತೋರದ ಕಾರ್ಖಾನೆ ಆಡಳಿತ ಮಂಡಳಿಯ ವರ್ತನೆಗೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: