ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಜಾಬ್ ಆಫರ್: ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ
Central Bank of India Recruitment 2024 — ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹಲವು ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಜನವರಿ 12, 2025 ರವರೆಗೆ ಅವಕಾಶ ನೀಡಲಾಗಿದೆ. ಈ ನೇಮಕಾತಿಯ ವಿವರವು ಈ ಲೇಖನದಲ್ಲಿದೆ.
ಹುದ್ದೆಗಳ ವಿವರ : ಈ ನೇಮಕಾತಿಯಲ್ಲಿ ಒಟ್ಟು 62 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟು?
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ, EWS ಹಾಗೂ OBC ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂಪಾಯಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಮಾಹಿತಿ ಹೇಗೆ?
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಸೂಚನೆಯನ್ನು ಒಂದು ಬಾರಿ ಸಂಪೂರ್ಣವಾಗಿ ಓದಿ ಪ್ರತಿಯೊಂದು ಅಗತ್ಯ ಮಾಹಿತಿಯನ್ನು ತಿಳಿದುಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅಧಿಕೃತ ಜಾಲತಾಣ– https://centralbankofindia.co.in/en
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: