ಆನ್ ಲೈನ್ ಬೆಟ್ಟಿಂಗ್ ಜಾಹೀರಾತು ಪ್ರಕಟಿಸುವ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

25/08/2023
ಆನ್ ಲೈನ್ ಬೆಟ್ಟಿಂಗ್ ಕುರಿತು ಜಾಹೀರಾತು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.
ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯವು ದಿನಪತ್ರಿಕೆಗಳು, ಸುದ್ದಿ ವಾಹಿನಿಗಳು, ಡಿಜಿಟಲ್ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಬೆಟ್ಟಿಂಗ್, ಜೂಜು ನಡೆಸುವ ವೇದಿಕೆಗಳಿಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸುತ್ತಿದ್ದಲ್ಲಿ ಈ ಕೂಡಲೇ ನಿಲ್ಲಿಸುವಂತೆ ಸೂಚಿಸಿದೆ. ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.