ಕೇಂದ್ರ-ರಾಜ್ಯ ಸರ್ಕಾರದಿಂದ ಕನ್ನಡಿಗರ ತಲೆಗೆ ಚಪ್ಪಡಿ ಕಲ್ಲು: ಕನ್ನಡಪರ ಸಂಘಟನೆಗಳಿಂದ ವಿನೂತನ ಪ್ರತಿಭಟನೆ - Mahanayaka
12:07 AM Tuesday 4 - February 2025

ಕೇಂದ್ರ–ರಾಜ್ಯ ಸರ್ಕಾರದಿಂದ ಕನ್ನಡಿಗರ ತಲೆಗೆ ಚಪ್ಪಡಿ ಕಲ್ಲು: ಕನ್ನಡಪರ ಸಂಘಟನೆಗಳಿಂದ ವಿನೂತನ ಪ್ರತಿಭಟನೆ

chamarajanagara
03/09/2023

ಚಾಮರಾಜನಗರ:  ಗಡಿ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ತಲೆ ಮೇಲೆ ಕಲ್ಲು ಹೊತ್ತು ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕನ್ನಡಿಗರ ತಲೆ ಮೇಲೆ ಚಪ್ಪಡಿ ಹಾಕಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಭುವನೇಶ್ವರಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು  ಶಾಸಕರು, ಸಂಸದರ ವಿರುದ್ದ ಘೋಷಣೆ ಕೂಗಿದರು.

ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು, ಕಾವೇರಿ ನ್ಯಾಯಾಧಿಕರಣಕ್ಕೆ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಬೇಕು ಎಂದು ಒತ್ತಾಯ ಮಾಡಿದರು.

ಇತ್ತೀಚಿನ ಸುದ್ದಿ