70 ವರ್ಷ ಮೇಲ್ಪಟ್ಟ ಎಲ್ಲರಿಗೂ ಆಯುಷ್ಮಾನ್ ಆರೋಗ್ಯ ವಿಮೆ ಸೇವೆಯನ್ನು ವಿಸ್ತರಿಸಿದ ಕೇಂದ್ರ ಸರ್ಕಾರ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಅಡಿಯಲ್ಲಿ ಆದಾಯವನ್ನು ಲೆಕ್ಕಿಸದೇ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಸಂಪುಟ ಸಭೆಯ ನಂತರ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, “70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ರಕ್ಷಣೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಈಗಾಗಲೇ ಅನೇಕ ಕುಟುಂಬಗಳು ವ್ಯಾಪ್ತಿಗೆ ಒಳಪಟ್ಟಿವೆ ಮತ್ತು ಹಿರಿಯ ನಾಗರಿಕರನ್ನು ಹೊಂದಿವೆ. ಅಂತಹ ಕುಟುಂಬಗಳಲ್ಲಿ, ಹೆಚ್ಚುವರಿ ಕವರೇಜ್, ಟಾಪ್-ಅಪ್ ಕವರೇಜ್ 5 ಲಕ್ಷ ರೂಪಾಯಿ ಇದೆ ಅಂದ್ರು.
4.5 ಕೋಟಿ ಕುಟುಂಬಗಳ 6 ಕೋಟಿ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ಗಳ ಉಚಿತ ಆರೋಗ್ಯ ವಿಮಾ ರಕ್ಷಣೆ ನೀಡುವ ಗುರಿಯನ್ನು ಈ ವ್ಯಾಪ್ತಿ ಹೊಂದಿದೆ ಎಂದು ಸಚಿವರು ಹೇಳಿದರು.
ಅರ್ಹ ಫಲಾನುಭವಿಗಳಿಗೆ ಈ ಯೋಜನೆಯಡಿ ಹೊಸ ವಿಶಿಷ್ಟ ಕಾರ್ಡ್ ನೀಡಲಾಗುವುದು ಎಂದು ಅವರು ಹೇಳಿದರು.
ಸರ್ಕಾರದ ಪ್ರಕಾರ, ಈಗಾಗಲೇ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಎಚ್ಎಸ್), ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ಇಸಿಎಚ್ಎಸ್), ಆಯುಷ್ಮಾನ್ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ನಂತಹ ಇತರ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿರುವ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ತಮ್ಮ ಅಸ್ತಿತ್ವದಲ್ಲಿರುವ ಯೋಜನೆಯನ್ನು ಆಯ್ಕೆ ಮಾಡಬಹುದು ಅಥವಾ ಎಬಿ-ಪಿಎಂಜೆಎವೈ ಅನ್ನು ಆಯ್ಕೆ ಮಾಡಬಹುದು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth