ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪೊಲೀಸರು ವಶಕ್ಕೆ - Mahanayaka

ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪೊಲೀಸರು ವಶಕ್ಕೆ

chaitra kundapura
01/03/2022

ಕಲಬುರಗಿ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಜಿಲ್ಲೆಯ ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Provided by

ಚೈತ್ರಾ ಮಂಗಳವಾರ ನಡೆಯಲಿರುವ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಲಬುರಗಿಗೆ ಆಗಮಿಸುತ್ತಿದ್ದರು. ಈ ವೇಳೆ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಆಗಮಿಸುತ್ತಿರುವ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ .27ರಿಂದ ಮಾ. 3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರಿಗೆ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಭಾನುವಾರ ಆದೇಶ ಹೊರಡಿಸಿದ್ದರು.


Provided by

ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ.27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಚ್ಚಾ ಬದಾಮ್ ಸಿಂಗರ್ ಭುಬನ್ ಬದ್ಯಾಕರ್ ಅಪಘಾತ

ನಟ ಚೇತನ್ ಅಹಿಂಸಾ ಬಿಡುಗಡೆ: ಅಭಿಮಾನಿಗಳಿಂದ ಸಂಭ್ರಮಾಚರಣೆ

ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು

ಗಾಂಜಾ ಮಾರಾಟ: ಆರೋಪಿ ಬಂಧನ

ರಷ್ಯಾ ದಾಳಿ: 14 ಮಕ್ಕಳು ಸೇರಿದಂತೆ 352 ಮಂದಿ ನಾಗರಿಕರು ಸಾವು; ಉಕ್ರೇನ್‌

ಇತ್ತೀಚಿನ ಸುದ್ದಿ