ಚಂದ್ರಶೇಖರ್‌ ಗುರೂಜಿಗೆ 60 ಬಾರಿ ಚಾಕುವಿನಿಂದ ಇರಿದು ಬರ್ಬರ ಹತ್ಯೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ - Mahanayaka

ಚಂದ್ರಶೇಖರ್‌ ಗುರೂಜಿಗೆ 60 ಬಾರಿ ಚಾಕುವಿನಿಂದ ಇರಿದು ಬರ್ಬರ ಹತ್ಯೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

chandra shekhar guruji
05/07/2022

ಹುಬ್ಬಳ್ಳಿ : ಸರಳವಾಸ್ತು, ಮಾವನಗುರು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ವರದಿಗಳ ಪ್ರಕಾರ 60 ಬಾರಿ ಚಾಕು ಇರಿದು ಕೊಲೆ ಮಾಡಿ  ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ ನಲ್ಲಿ ಹತ್ಯೆ ಮಾಡಲಾಗಿದ್ದು,  ಕೊಲೆ ನಡೆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಿಸಿ ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರೂ ಹಂತಕರು ಕೂಡ ಭಕ್ತರ ಸೋಗಿನಲ್ಲಿ ಹೋಟೆಲ್‌ ಗೆ ಬಂದಿದ್ದರು.

ಇಬ್ಬರೂ ಹುಡುಗರು ಚಂದ್ರಶೇಖರ್‌ ಗುರೂಜಿ ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ. ನಂತರದಲ್ಲಿ ಇಬ್ಬರೂ ಸೇರಿಕೊಂಡು ಚಂದ್ರಶೇಖರ್‌ ಗುರೂಜಿ ಅವರಿಗೆ ಚಾಕುವಿನಿಂದ ಇರಿದು ಹತ್ಯೆಯನ್ನು ಮಾಡಿದ್ದಾರೆ.

ಚಂದ್ರಶೇಖರ ಗುರೂಜಿ ಅವರ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸುಫಾರಿ ಕೊಟ್ಟು ಈ ಹತ್ಯೆಯನ್ನು ಮಾಡಲಾಗಿದೆಯೇ ಅಥವಾ ಇನ್ನೇನಾದರೂ ಕಾರಣಗಳಿವೆ ಎನ್ನುವ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುತ್ತಿದ್ದರು. ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಕಿಮ್ಸ್‌ ಆಸ್ಪತ್ರೆಗೆ ಗುರೂಜಿ ಅವರ ಮೃತದೇಹವನ್ನು ಸಾಗಿಸಲಾಗಿದೆ.

ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ಜುಲೈ 2 ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ ಗೆ ಬಂದು ಚಂದ್ರಶೇಖರ್‌ ಗುರೂಜಿ ಅವರು ಉಳಿದುಕೊಂಡಿದ್ದರು. ನಾಳೆ ಗುರೂಜಿ ಹೋಟೆಲ್‌ ರೂಂ ಖಾಲಿ ಮಾಡಬೇಕಾಗಿತ್ತು. ಆದ್ರೆ ಹಂತರು ಇಂದು ಗುರೂಜಿ ಅವರನ್ನು ಹತ್ಯೆ ಮಾಡಿದ್ದಾರೆ. ಪೂರ್ವ ನಿಯೋಜಿತವಾಗಿ ಹತ್ಯೆ ಮಾಡಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

 

ಇತ್ತೀಚಿನ ಸುದ್ದಿ