ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಜೀಪು: ನಾಲ್ವರಿಗೆ ಗಾಯ

10/10/2022
ಬೆಳ್ತಂಗಡಿ: ಕಾಯರ್ತಡ್ಕದಿಂದ ಕುದುರಾಯಕ್ಕೆ ಬರುತ್ತಿದ್ದ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ.
ಕಾಯರ್ತಡ್ಕದಿಂದ ಬರುತ್ತಿದ್ದ ಜೀಪು ಬರಂಗಾಯ ಸಮೀಪ ಚಾಲಕ ದುಡುಕುತನದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಜೀಪಿನಲ್ಲಿಪ್ರಯಾಣಿಸುತ್ತಿದ್ದ ಮಂಜಪ್ಪ, ಗುರುವ, ಯಮುನ, ಸಂತೋಷ್ ಎಂಬವರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ಜೀಪು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka