ಚಲಿಸುತ್ತಿದ್ದ ಓಮ್ನಿಗೆ ಹತ್ತಿಕೊಂಡ ಬೆಂಕಿ: ಓಮ್ನಿ ಬೆಂಕಿಗಾಹುತಿ
ಬಂಟ್ವಾಳ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದೆ.
ದೇರಳಕಟ್ಟೆ ಮೂಲದ ಕುಟುಂಬ ಓಮ್ನಿ ವಾಹನದಲ್ಲಿ ಮಾಣಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ಕೂಡಲೇ ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ.
ತತ್ ಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಳಿಕ ಸ್ಥಳೀಯ ವಿನಯ ಎಂಬವರ ಸರ್ವೀಸ್ ಸ್ಟೇಷನ್ ನಿಂದ ನೀರು ಹರಿಸಿ ಬೆಂಕಿಯನ್ನು ನಂದಿಸಲಾಯಿತು.
ಆದರೆ ಅಷ್ಟರಲ್ಲಿ ಓಮ್ನಿ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಪರಿಶೀಲಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka