ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ: ಸ್ವಲ್ಪ ತಡವಾಗಿದ್ದರೆ ನಡೆಯುತ್ತಿತ್ತು ಭಾರೀ ದುರಂತ!
ಧಾರವಾಡ: ಧಾರವಾಡ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲವೇ ಕ್ಷಣಗಳ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲು ತಲುಪಿದಾಗ ರೈಲಿನ 3ನೇ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ವೇಳೆ ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ರೈಲು ನಿಲ್ಲಿಸಿ, ಪ್ರಯಾಣಿಕರನ್ನು ತಕ್ಷಣವೇ ಬೋಗಿಯಿಂದ ಕೆಳಗೆ ಇಳಿಸಿದ್ದಾರೆ. ಆದರೂ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ತಕ್ಷಣವೇ ರೈಲ್ವೆ ಸಿಬ್ಬಂದಿ ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದ್ದು, ಬೆಂಕಿ ಇತರ ಬೋಗಿಗಳಿಗೆ ಹಬ್ಬಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಶಾಕಿಂಗ್ ನ್ಯೂಸ್!
ಪರೋಟ ಸೇವಿಸಿದ ಬಾಲಕನ ದಾರುಣ ಸಾವು: ಪೋಷಕರಿಗೆ ಕಾದಿತ್ತು ಶಾಕಿಂಗ್ ನ್ಯೂಸ್!
ಬೇಸಿಗೆ ಕಾಲದಲ್ಲಿ ಹೆಚ್ಚು ಬೆಳ್ಳುಳ್ಳಿ ಸೇವಿಸಿದರೆ ಏನಾಗುತ್ತದೆ?
ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ವಿರೋಧಿಸಿದ್ದಕ್ಕೆ ರೈಲಿನಿಂದ ಕೆಳಗೆ ಎಸೆದ ಪಾಪಿ!
ಪಿಎಸ್ ಐ ಮರು ಪರೀಕ್ಷೆ ನಿರ್ಧಾರದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ತಲೆನೋವು!