ಚಲಿಸುತ್ತಿದ್ದ ಬಸ್ಸಿನಲ್ಲಿ ಬಿಯರ್ ಕುಡಿದು ಡಾನ್ಸ್ ಮಾಡಿದ ವಿದ್ಯಾರ್ಥಿಗಳು!: ವಿಡಿಯೋ ವೈರಲ್ - Mahanayaka
5:03 PM Wednesday 11 - December 2024

ಚಲಿಸುತ್ತಿದ್ದ ಬಸ್ಸಿನಲ್ಲಿ ಬಿಯರ್ ಕುಡಿದು ಡಾನ್ಸ್ ಮಾಡಿದ ವಿದ್ಯಾರ್ಥಿಗಳು!: ವಿಡಿಯೋ ವೈರಲ್

school students
25/03/2022

ಚೆಂಗಲ್‌ ಪೇಟ್: ಶಾಲೆಗೆ ಹೋಗುವ ವಿದ್ಯಾರ್ಥಿಗಳ ಕೈಯಲ್ಲಿ ಬಿಯರ್ ಬಾಟಲಿಗಳು, ಈ ದೃಶ್ಯ ನೋಡಿದವರು “ಕಾಲ ಕೆಟ್ಟು ಹೋಯ್ತು ಮರಾಯ್ರೆ” ಅಂತ ಹೇಳುವಂಯಾಗಿದೆ.

ಹೌದು..! ತಮಿಳುನಾಡಿನ ಚೆಂಗಾಲ್ ಪೇಟ್ ಜಿಲ್ಲೆಯಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬಿಯರ್ ಕುಡಿದು ಮತ್ತಿನಲ್ಲಿ ತೇಲಾಡುತ್ತಾ ಡಾನ್ಸ್ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚೆಂಗಲ್ಪಟ್ಟುವಿನಿಂದ  ತಚ್ಚೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ನಲ್ಲಿದ್ದ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳೆನ್ನಲಾಗಿರುವ ಕೆಲವು ವಿದ್ಯಾರ್ಥಿಗಳು ಮದ್ಯದ ಅಮಲಿನಲ್ಲಿ ಗಲಾಟೆ ಮಾಡುತ್ತಾ, ಡಾನ್ಸ್ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡು ಬಂದಿದೆ.

ಇನ್ನೂ ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಮಧ್ಯಪ್ರವೇಶಿಸಿ, ವಿದ್ಯಾರ್ಥಿಗಳನ್ನು ಕರೆಸಿ ಎಚ್ಚರಿಕೆ ನೀಡಿದೆ ಎಂದು ಹೇಳಲಾಗಿದೆ. ಇನ್ನೂ ಈ ವಿಡಿಯೋ ನೋಡಿದ ಬಳಿಕ ಪೋಷಕರು ಕೂಡ ಆತಂಕಕ್ಕೀಡಾಗಿದ್ದು, ಮಕ್ಕಳನ್ನು ಹೇಗೆ ನಿಯಂತ್ರಿಸುವುದು ಎನ್ನುವ ಚಿಂತೆಗೊಳಗಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅರವಿಂದ್ ಕೇಜ್ರಿವಾಲ್‌ ‘ಅರ್ಬನ್‌ ನಕ್ಸಲ್‌’: ಬಿಜೆಪಿ ಮುಖಂಡ ಅಮಿತ್‌ ಮಾಳವಿಯಾ

ಪತಿಯನ್ನು ಮರಕ್ಕೆ ಕಟ್ಟಿ, ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ

ಬಿರ್ಭೂಮ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

ಅಚ್ಚರಿಯ ಹೇಳಿಕೆ: ಚುನಾವಣಾ ರಾಜಕಾರಣದಿಂದ ನಿವೃತ್ತಿ; ವಿಪಕ್ಷ ನಾಯಕ ಸಿದ್ದರಾಮಯ್ಯ

ಶಾಸಕ ರೇಣುಕಾಚಾರ್ಯ ಪುತ್ರಿಗೆ ಎಸ್‌ಸಿ ಪ್ರಮಾಣ ಪತ್ರ: ಸರಕಾರ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಿ; ಸಿದ್ದರಾಮಯ್ಯ

 

 

ಇತ್ತೀಚಿನ ಸುದ್ದಿ