ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು: ತಂದೆ ಹಾಗೂ ಇಬ್ಬರು ಮಕ್ಕಳು ಸಾವು
ತುಮಕೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದು, ಚಲಿಸುತ್ತಿದ್ದ ಲಾರಿಗೆ ಕಾರು ಏಕಾಏಕಿ ಡಿಕ್ಕಿಯಾದ ಪರಿಣಾಮ ಮೂವರೂ ಸಾವನ್ನಪ್ಪಿದ್ದಾರೆ.
ಅವಿನಾಶ್(28), ಪ್ರಣತಿ(5), ಸೌಖ್ಯ(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಾಳು ಬಾಲಕಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka