ಆನೆಗಳ ಸಂಖ್ಯೆಯಲ್ಲಿ ರಾಜ್ಯಕ್ಕೆ ಚಾಮರಾಜನಗರ ನಂ.1 

chamarajanagara
10/08/2023

ಚಾಮರಾಜನಗರ: ಹುಲಿಗಳ ಗಣತಿಯಲ್ಲಿ ರಾಜ್ಯಕ್ಕೇ ನಂ.1 ಸ್ಥಾನ ಪಡೆದಿದ್ದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಆನೆಗಳ ಸಂಖ್ಯೆಯಲ್ಲೂ ಮೊದಲ ಸ್ಥಾನದಲ್ಲಿ ಹೊರಹೊಮ್ಮಿದೆ.

ಚಾಮರಾಜನಗರ ಜಿಲ್ಲೆಯಲ್ಲೇ ಅತಿ ಹೆಚ್ಚು ಆನೆಗಳು ಇರುವುದು ಅಂಕಿ-ಅಂಶಗಳಲ್ಲಿ ತಿಳಿದುಬಂದಿದ್ದು ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಜ್ಯದಲ್ಲೇ ಅತಿಹೆಚ್ಚು ಆನೆಗಳಿರುವ ಅರಣ್ಯ ಪ್ರದೇಶವಾಗಿದ್ದು 1,116 ಗಜಗಳಿವೆ. ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ 484 ಆನೆಗಳಿವೆ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 557 ಆನೆಗಳು ವಾಸ ಮಾಡಲಿದ್ದು ಕಾವೇರಿ ವನ್ಯಜೀವಿ ಧಾಮದಲ್ಲಿ 236 ಆನೆಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

2023ರ ಮೇ 17 ರಿಂದ 19 ರವರೆಗೆ ರಾಜ್ಯದ 32 ವಿಭಾಗಗಳಲ್ಲಿ 3,400 ಮಂದಿ ಗಣತಿ ಕಾರ್ಯ ನಡೆಸಿದ್ದರು. ಆನೆಗಳ ಗುಂಪು, ಲದ್ದಿ, ನೀರಿರುವ ಸ್ಥಳಗಳಲ್ಲಿ ಆನೆಗಳನ್ನು ನೇರವಾಗಿ ಎಣಿಸುವ ಆಧಾರದ ಮೇಲೆ ಆನೆ ಗಣತಿ ಕಾರ್ಯ ನಡೆಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version