ಖಾಸಗಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ - Mahanayaka
10:58 AM Thursday 12 - December 2024

ಖಾಸಗಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ

chamarajanagara
22/01/2023

ಖಾಸಗಿ ಬಸ್ ವೊಂದು ಸ್ವಯಂ ಅಪಘಾತವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಗೂರು ಕ್ರಾಸ್  ಬಳಿ ಭಾನುವಾರ ಮುಂಜಾನೆ 4 ರ ಸುಮಾರಿಗೆ ನಡೆದಿದೆ.

ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರು ಕಡೆಗೆ ತೆರಳುತ್ತಿದ್ದ  ಉದಯರಂಗ ಎಂಬ ಖಾಸಗಿ ಬಸ್ ಇದಾಗಿದ್ದು, ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.   ಬಸ್ಸಿನಲ್ಲಿ 50 ರಿಂದ 60 ಜನ ಪ್ರಯಾಣಿಕರಿದ್ದು 30 ರಿಂದ 35 ಜನರಿಗೆ ಗಾಯಗಳಾಗಿದ್ದು ಎಲ್ಲರನ್ನೂ  ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಾಮರಾಜನಗರ ಹೊಯ್ಸಳ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ.

ಘಟನಾ ಸ್ಥಳವು ಮೈಸೂರು ಜಿಲ್ಲೆಯ ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರುವುದರಿಂದ ಚಾಮರಾಜನಗರ ಪೊಲೀಸರು ಮೈಸೂರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ