ಜೂನ್ 20ರಂದು ಚಾಮುಂಡಿಬೆಟ್ಟಕ್ಕೆ ಪ್ರಧಾನಿ ಮೋದಿ ಭೇಟಿ
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಜೂನ್ 20ರಂದು ಮೈಸೂರಿಗೆ ಆಗಮಿಸಲಿದ್ದು ತಮ್ಮ ಭೇಟಿ ಸಂದರ್ಭದಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ.
ಜೂ.20ರಂದು ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಜೂ.21ರಂದು ಬೆಳಿಗ್ಗೆ 6.30ರಿಂದ 7.45ರವರೆಗೆ ಅರಮನೆ ಆವರಣದಲ್ಲಿ ನಡೆಯಲಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ 8.30ರಿಂದ 9ಗಂಟೆಯವರೆಗೂ ಅಂದರೆ 30 ನಿಮಿಷಗಳ ಕಾಲ ಅರಮನೆಯಲ್ಲಿ ರಾಜಮನೆತನದ ಕುಟುಂಬ ಸದಸ್ಯರೊಟ್ಟಿಗೆ ಕಾಲ ಕಳೆಯಲಿದ್ದಾರೆ. ನಂತರ ಕೇರಳದ ತಿರುವನಂತಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ.
ಜೂ.20ರಂದೇ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿಯವರು ಬೆಂಗಳೂರಿನಲ್ಲಿ ಸಬರ್ಬನ್ ರೈಲ್ವೆ ಯೋಜನೆಗೆ ಶಿಲಾನ್ಯಾಸ ನೆರವೇರಿಸಿ ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ
ವಿಶೇಷ ಹೆಲಿಕಾಪ್ಟರಲ್ಲಿ ಮೈಸೂರಿಗೆ ಆಗಮಿಸಲಿದ್ದು ಸುತ್ತೂರು ಮಠಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ.
ಬಳಿಕ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ದರ್ಶನ ಪಡೆದು ಅಲ್ಲಿಂದ ಬ್ಲೂ ಪ್ಲಾಜಾ ಹೋಟೆಲ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಿ ಬೆಳಗಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿವಾಹದ ಬಳಿಕ ವೃತ್ತಿ ಜೀವನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ನಯನತಾರಾ
ಮಳಲಿ ಮಸೀದಿ ವಿವಾದ: ಯಾವುದೇ ಆದೇಶ ಮಾಡದಂತೆ ಹೈಕೋರ್ಟ್ ನಿರ್ದೇಶನ
ಜಾತ್ರೆ ವೇಳೆ ಉರುಳಿ ಬಿದ್ದ ರಥ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು