ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಕಾರು!
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ 8ನೇ ತಿರುವಿನಲ್ಲಿ ಕಾರೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಕೆಲ ಕಾಲ ಸ್ಥಳೀಯರು ತೀವ್ರ ಆತಂಕಕ್ಕೀಡಾದ ಘಟನೆ ನಡೆದಿದ್ದು, ಆದರೆ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪರಾಗಿದ್ದಾರೆ.
ಗುರುವಾರ ಸಂಜೆ ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪರಾಗಿದ್ದಾರೆ. ಕಾರು ಕಂದಕಕ್ಕೆ ಉರುಳಿದ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಕಾರಿನಲ್ಲಿದ್ದವರ ನೆರವಿಗೆ ಆಗಮಿಸಿದ್ದಾರೆ.
ಇನ್ನೂ ಘಟನೆಯಿಂದ ಸ್ವಲ್ಪ ಸಮಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಒಂದು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ಸಿನಿಮಾ, ನಾಟಕ ಪ್ರದರ್ಶನಗಳಿಗೆ ಪೂರ್ಣ ಪ್ರಮಾಣದ ಅವಕಾಶ ನೀಡಿ | ದೇವದಾಸ್ ಕಾಪಿಕಾಡ್ ಒತ್ತಾಯ
ದೇವಾಲಯ ತೆರವು: ಸಂಸದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹಗೆ ಹಿಂದೂ ಕಾರ್ಯಕರ್ತರ ಮುತ್ತಿಗೆ
2023ರಲ್ಲಿ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರುತ್ತದೆ: ಹೆಚ್.ಡಿ.ದೇವೇಗೌಡ ಗುಡುಗು
ಖ್ಯಾತ ಚಿತ್ರಕಲಾ ಶಿಕ್ಷಕ ಯತೀಶ್ ಕುಮಾರ್ ಅವರಿಗೆ ‘ಶಿಕ್ಷಕ ರತ್ನ ಪ್ರಶಸ್ತಿ’
ಮಕ್ಕಳಿಗೆ ಎರಡು ದಿನಗಳಿಗಿಂತ ಹೆಚ್ಚುಕಾಲ ಕೊವಿಡ್ ಲಕ್ಷಣಗಳಿದ್ದರೆ ತಪ್ಪದೇ ಪರೀಕ್ಷೆ ನಡೆಸಿ
ಶಾಕಿಂಗ್ ನ್ಯೂಸ್: ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲಾಗ್ತಿವೆ!
ಪ್ರೀತಿಯ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ | ನಾಲ್ವರು ಆರೋಪಿಗಳು ಅರೆಸ್ಟ್