ಖ್ಯಾತ ಕವಿ ಚೆನ್ನವೀರ ಕಣವಿ ಆರೋಗ್ಯದಲ್ಲಿ ಏರುಪೇರು - Mahanayaka
10:52 AM Thursday 12 - December 2024

ಖ್ಯಾತ ಕವಿ ಚೆನ್ನವೀರ ಕಣವಿ ಆರೋಗ್ಯದಲ್ಲಿ ಏರುಪೇರು

21/01/2022

ಧಾರವಾಡ: ಕೋವಿಡ್ ಸೋಂಕು ತಗುಲಿದ ಕಾರಣ ಧಾರವಾಡದ ಎಸ್‌ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಖ್ಯಾತ ಕವಿ ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿರುವ ಬಗ್ಗೆ ವರದಿಯಾಗಿದೆ.

ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್‌ಡಿಎಂ ಆಸ್ಪತ್ರೆ ಬುಧವಾರ ತಿಳಿಸಿದೆ.

ಜ್ವರದಿಂದ ಬಳಲುತ್ತಿದ್ದ ಡಾ. ಕಣವಿ ಅವರನ್ನು ಜ. 14ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿತ್ತು. ಅಲ್ಲಿಂದ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ.

ಮಂಗಳವಾರ 8 ಲೀ. ಆಮ್ಲಜನವನ್ನು ನೀಡಲಾಗಿದೆ. ಡಾ. ಚೆನ್ನವೀರ ಕಣವಿ ಅವರ ಆಸ್ಪತ್ರೆಯ ವೆಚ್ಚ ಭರಿಸಲು ಕ್ರಮ ವಹಿಸಲಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ತಿಳಿಸಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್‌ ಜೋಶಿ ಅವರು ಕವಿ ಕಣವಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೆಸರಾಂತ ಮಕ್ಕಳ ತಜ್ಞ ಡಾ.ದಿನೇಶ್ ಅವರ ಸ್ಮರಣಾರ್ಥ ಚಾಲ್ಸ್ ಆಂಬುನೆಲ್ಸ್ ನಿಂದ ಉಚಿತ ಸೇವೆ

ಬಿಜೆಪಿ ಶಾಸಕ ಅನಿಲ್‌ ಬೆನಕೆಯಿಂದ ಕೋವಿಡ್ ನಿಯಮ ಉಲ್ಲಂಘನೆ: ಪ್ರಕರಣ ದಾಖಲು

ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು: ದಕ್ಷಿಣ ಕನ್ನಡದ 5 ಶಾಲೆ, 1 ಪಿಯು ಕಾಲೇಜು ಸ್ಥಗಿತ

ಇತ್ತೀಚಿನ ಸುದ್ದಿ