ಚಿಕ್ಕಬಳ್ಳಾಪುರದಲ್ಲಿ ಭಾರೀ ಸ್ಫೋಟ: ಮನೆ ಸಂಪೂರ್ಣ ಛಿದ್ರ; ದಂಪತಿಗೆ ಗಂಭೀರ ಗಾಯ - Mahanayaka

ಚಿಕ್ಕಬಳ್ಳಾಪುರದಲ್ಲಿ ಭಾರೀ ಸ್ಫೋಟ: ಮನೆ ಸಂಪೂರ್ಣ ಛಿದ್ರ; ದಂಪತಿಗೆ ಗಂಭೀರ ಗಾಯ

spota
27/02/2022

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಗ್ರಾಮದ ಮನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಡೀ ಮನೆ ಸಂಪೂರ್ಣ ಛಿದ್ರಗೊಂಡಿದ್ದು, ದಂಪತಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗ್ಗಿನ ಜಾವ ನಡೆದಿದೆ.

ವಿನಯ್ ಹಾಗೂ ನಂದಿನಿ ಗಂಭೀರ ಗಾಯಗೊಂಡವರು. ಅವರು ಶಾಂತರಾಜು ಅವರ ಬಾಡಿಗೆ ಮನೆಯಲ್ಲಿ ವಿನಯ್ ಹಾಗೂ ನಂದಿನಿ ವಾಸವಾಗಿದ್ದರು. ಬೆಳಗ್ಗಿನ ಜಾವ ಮನೆಯಲ್ಲಿ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮನೆ ಕುಸಿದುಬಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲವೂ ಚೆಲ್ಲಾಪಿಲ್ಲಿಯಾಗಿವೆ.
ಮನೆಯಲ್ಲಿದ್ದ ವಿನಯ್ ಹಾಗೂ ನಂದಿನಿಗೆ ಸುಟ್ಟು ಗಾಯಗಳಾಗಿವೆ. ಅಲ್ಲದೆ, ವಿನಯ್ ತಲೆ ಮೇಲೆ ಕಲ್ಲು ಬಿದ್ದು ಗಂಭೀರ ಗಾಯವಾಗಿದೆ. ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ವಿದ್ಯುತ್ ಕಂಬವೂ ಹಾನಿಗೊಳಗಾಗಿದೆ.

ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬೆಂಗಳೂರಿನಿಂದ ಎಫ್‍ ಎಸ್‍ ಎಲ್ ತಂಡ ಸಹ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹರ್ಷ ಸಾವಿನ ಬಳಿಕದ ಗಲಭೆಗೆ ಈಶ್ವರಪ್ಪನೇ ಕಾರಣ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಬಿಜೆಪಿ ಬಡವರಿಂದ ಹಣ ಪಡೆದು ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದೆ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್

ದೇಶದ ರಕ್ಷಣೆಗೆ ಬಂದೂಕು ಹಿಡಿದ ಉಕ್ರೇನ್ ಅಧ್ಯಕ್ಷ

ಕಾರು-ಬುಲೆಟ್​ ಡಿಕ್ಕಿ: ಇಬ್ಬರ ಸ್ಥಳದಲ್ಲೇ ಸಾವು

ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

 

 

ಇತ್ತೀಚಿನ ಸುದ್ದಿ