ಮತ್ತೊಂದು ಮಸೀದಿ ವಿವಾದ: ಸ್ಥಳಕ್ಕೆ ನಗರ ಸಭೆ ಅಧ್ಯಕ್ಷ, ಅಧಿಕಾರಿಗಳ ಭೇಟಿ
ಚಿಕ್ಕಮಗಳೂರು: ಅನಧಿಕೃತ ಮಸೀದಿ ನಿರ್ಮಾಣದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯ ಮಸೀದಿಗೆ ನಗರಸಭೆ ಅಧ್ಯಕ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅನೇಕ ವರ್ಷಗಳಿಂದ ಈ ಮಸೀದಿ ಕಾರ್ಯಾಚರಿಸುತ್ತಿತ್ತು ಎನ್ನಲಾಗಿದೆ. ಮಸೀದಿಯು ಅನಧಿಕೃತ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಪರಿಶೀಲನೆ ನಡೆಸಿದ್ದು, 3 ದಿನಗಳ ಒಳಗೆ ಮಸೀದಿ ದಾಖಲೆಗಳನ್ನು ಹಾಜರುಪಡಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.
ಮಸೀದಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಇಲ್ಲವಾದರೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ. ಇದೇ ವೇಳೆ ನಗರಸಭೆ ಆಯುಕ್ತ ಬಸವರಾಜ್ ಮತ್ತಿತರರು ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka