ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಬಾಲಕಿ ಬಲಿ ಪ್ರಕರಣ: ಆರೋಪಿ ನಿತೇಶ್ ನನ್ನು ಸಂಘಟನೆಯಿಂದ ಹೊರ ಹಾಕಿದ ಬಜರಂಗದಳ
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬಜರಂಗದಳ ತನ್ನ ಸಂಘಟನೆಯಿಂದ ಆರೋಪಿಯನ್ನು ಹೊರ ಹಾಕಿದೆ.
ಆರೋಪಿ ನಿತೇಶ್ ಬಜರಂಗದಳ ಸಂಸೆ ಘಟಕದ ಸಂಯೋಜಕನಾಗಿದ್ದ. ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗೆ ನಿತೇಶ್ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಗಂಭೀರತೆ ಪಡೆದುಕೊಳ್ಳುತ್ತಿದ್ದಂತೆಯೇ ಆರೋಪಿಯನ್ನು ಬಜರಂಗದಳ ಸಂಘಟನೆಯಿಂದ ಹೊರ ಹಾಕಿದೆ.
ನಿತೇಶ್ ಗೂ ಬಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಂಘಟನೆಯ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಿತೇಶ್ ಕಾರ್ಗದ್ದೆ ಅವರ ನಡವಳಿಕೆಯಲ್ಲಿ ಕೆಲವೊಂದು ಲೋಪದೋಷಗಳಿದ್ದು ಸಂಘಟನೆಯ ಸಿದ್ಧಾಂತಕ್ಕೆ ವಿರುದ್ಧವಾದ ಕಾರಣ ಅವರನ್ನು ಸಂಘಟನೆಯ ಜವಾಬ್ದಾರಿಗಳಿಂದ ತೆರವುಗೊಳಿಸುವುದಾಗಿ, ಹಿರಿಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ. ಬಜರಂಗದಕ್ಕೂ ನಿತೇಶ್ ಗೂ ಯಾವುದೇ ಸಂಬಂಧವಿಲ್ಲ ಎಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.
ನಿತೇಶ್ ಕಿರುಕುಳಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಕ್ರಿಮಿನಾಶಕ ಸೇವಿಸಿ ಜನವರಿ 10ರಂದು ಆತ್ಮಹತ್ಯೆಗೆ ಯತ್ನಿಸಿದ್ದಳು. ಜನವರಿ 14ರಂದು ಸಂತ್ರಸ್ತ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw