ಬಿಜೆಪಿಗೆ ಸೇರ್ಪಡೆಯಾಗಿದ್ದಕ್ಕೆ ಯುವಕನ ಕೈ ಮುರಿದ ಕಾಂಗ್ರೆಸ್ ಕಾರ್ಯಕರ್ತರು!
ಚಿಕ್ಕಮಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ.
ರಾವೂರು ಗ್ರಾಮದ ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಹಾಲಿ ಬಿಜೆಪಿ ಕಾರ್ಯಕರ್ತ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಶಿವು ಅವರ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
N.R.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಿಜೆಪಿಗೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರ ಹಿಂಬಾಲಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw