ಬಿಜೆಪಿ ಅಧ್ಯಕ್ಷರ ಕಾರು ಅಲುಗಾಡಿದಂತೆ ಬಿಜೆಪಿ ಸರ್ಕಾರ ಅಲುಗಾಡುತ್ತದೆ: ಶ್ರೀರಾಮಸೇನೆ ಎಚ್ಚರಿಕೆ

shri rama sene dattapita
07/11/2022

ಚಿಕ್ಕಮಗಳೂರು:  ಪ್ರತಿ ವರ್ಷ ಬರೋದು, ಹೆಣ ಇಲ್ಲದ ಗೋರಿ ನೋಡೋದು ವಾಪಸ್ ಹೋಗೋದು.  ಎಚ್ಚರಿಕೆ ನೀಡಿ, ನೀಡಿ, ಬೇಜಾರಾಗಿ ಆಕ್ರೋಶವಾಗಿದೆ. ನಮಗೆ ಈ‌ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ ಎಂದು ರಾಜ್ಯ ಬಿಜೆಪಿ ವಿರುದ್ಧ ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಕಿಡಿಕಾರಿದ್ದಾರೆ.

18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನದಲ್ಲಿ ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆಯ ಬಳಿಕ ಮಾತನಾಡಿದ ಅವರು,  ಧರ್ಮದ ವಿಚಾರದಲ್ಲಿ ಡ್ರಾಮಾ ಒಳ್ಳೆದಲ್ಲ, ತಕ್ಷಣ ಏನಾದ್ರು ಆಗಲಿ ಎಂದು ಗಟ್ಟಿ ನಿರ್ಧಾರ ಮಾಡಿ ಕೂಡಲೇ ದತ್ತಪೀಠವನ್ನ ಹಿಂದೂಗಳ ಪೀಠವೆಂದು ಆದೇಶಿಸಿ, ಹಿಂದೂ ಅರ್ಚಕರ ನೇಮಿಸಿ. 13ನೇ ತಾರೀಖಿನೊಳಗೆ ಅರ್ಚಕರ ನೇಮಿಸದಿದ್ದರೆ ಪರಿಸ್ಥಿತಿ ಕಠಿಣವಾಗುತ್ತೆ ಎಂದರು.

ಹೇಗೆ ಬಿಜೆಪಿ ಅಧ್ಯಕ್ಷರ ಕಾರು ಅಲುಗಾಡಿತ್ತೋ, ಅದೇ ರೀತಿ ಸರ್ಕಾರ ಅಲುಗಾಡುತ್ತೆ. ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸದಿದ್ದರೆ ಯಡಿಯೂರಪ್ಪರ ಪೀಠ ಹೋಗುತ್ತೆ ಎಂದು ಹೇಳಿದ್ದೆ. ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪ ಪೀಠ ಕಳ್ಕೊಂಡ್ರು‌,  ಈಗ ಬೊಮ್ಮಾಯಿಗೂ ಹೇಳ್ತಿದ್ದೀವಿ, ಮುಂದೆ ಸರ್ಕಾರ ಬರಬೇಕಂದ್ರೆ ತಕ್ಷಣ ದತ್ತಪೀಠವನ್ನ ಹಿಂದುಗಳಿಗೆ ಒಪ್ಪಿಸಿ ಇಲ್ಲವಾದರೆ, ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತೆ ಎಂದು ಎಚ್ಚರಿಸಿದರು.

ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆಯಲ್ಲಿ 50ಕ್ಕೂ ಹೆಚ್ಚು ಶ್ರೀರಾಮಸೇನೆಯ ಕಾರ್ಯಕರ್ತರು  ಮಾಲಾಧಾರಣೆ ಮಾಡಿದರು. ರಾಜ್ಯ ಕಾರ್ಯಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರಿಂದ ಮಾಲಾಧಾರಣೆ ಮಾಡಿದರು.

ಇಂದಿನಿಂದ ಏಳು ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದೆ. ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಮಾಲಾಧಾರಣೆ ನಡೆಯಲಿದೆ. ನವೆಂಬರ್ 13 ರಂದು ದತ್ತಪೀಠದಲ್ಲಿ ಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version