ಅನುದಾನ ತಡೆ ಹಿಡಿಯಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತಡೆ ಹಿಡಿಯಲಾಗಿದೆ ಎಂದು ಆರೋಪಿಸಿ, ರಾಜ್ಯ ಸರ್ಕಾರದ ವಿರುದ್ದ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ತಾಲ್ಲೂಕು ಕಚೇರಿ ಆಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ತಕ್ಷಣವೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw