ರಸ್ತೆ ವಿವಾದ: ಯುವಕನನ್ನು ಕತ್ತಿ, ಹಾರೆಯಿಂದ ಹೊಡೆದು ಬರ್ಬರ ಹತ್ಯೆ - Mahanayaka
5:22 PM Thursday 12 - December 2024

ರಸ್ತೆ ವಿವಾದ: ಯುವಕನನ್ನು ಕತ್ತಿ, ಹಾರೆಯಿಂದ ಹೊಡೆದು ಬರ್ಬರ ಹತ್ಯೆ

praveen
05/05/2023

ಜಮೀನಿನ ರಸ್ತೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವನ ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46 ವರ್ಷ) ಕೊಲೆಯಾದ ಯುವಕ.

ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಇಂದು ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ  ವಿವಾದಿತ ರಸ್ತೆಯಲ್ಲಿ ವಿರೋಧಿ ಗುಂಪಿನವರು ಕೆಲಸ ಮಾಡುತ್ತಿದ್ದಾಗ ಅದನ್ನು ಪ್ರಶ್ನಿಸಲು ಬಂದ ಪ್ರವೀಣ್ ಮೇಲೆ ಗುಂಪು ಕತ್ತಿ ಹಾರೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ.

ತೀವ್ರ ಗಾಯಗೊಂಡಿದ್ದ ಪ್ರವೀಣ್  ಕೊನೆಯುಸಿರೆಳೆದಿದ್ದಾರೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ  ಚಿಕ್ಕಮಗಳೂರು ಆಸ್ಪತ್ರೆ ಒಯ್ಯಲಾಗಿದೆ.

ಈ ಸಂದರ್ಭದಲ್ಲಿ ಪ್ರವೀಣ್ ಅವರ ತಂದೆ ಲಕ್ಷ್ಮಣಗೌಡ ಅವರ ಬಲಗೈಗೂ ತೀವ್ರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ರಸ್ತೆಗೆ ಸಂಬಂಧಿಸಿದಂತೆ ಕೆಲ ವರ್ಷಗಳಿಂದ ವಿವಾದ ನಡೆಯುತ್ತಿತ್ತು, ಈಗ್ಗೆ ಕೆಲ ತಿಂಗಳ ಹಿಂದೆ ಪರಸ್ಪರ ಎರಡು ಕಡೆಯವರ ನಡುವೆ ಹೊಡೆದಾಟ ನಡೆದಿತ್ತು. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ